Thursday, November 7, 2024

Latest Posts

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

- Advertisement -

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ?

ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಹಾಲಿ ಶಾಸಕರಲ್ಲದಿದ್ದರೂ ಅವರ ಸಮಸ್ಯೆಗಳಿರುತ್ತವೆ. ಅವುಗಳನ್ನು ನಾನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಮಗೆ ಆಪರೇಷನ್ ಹಸ್ತ ಮಾಡುವ ಅಗತ್ಯವಿಲ್ಲ. ರಾಜಕೀಯವಾಗಿ ಅನೇಕ ಆಸೆ ಆಕಾಂಕ್ಷೆಗಳಿರುತ್ತವೆ. ಅವರು ಎಷ್ಟು ದಿನ ಎಂದು ಕಾಯುತ್ತಾರೆ. ನಾವು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಳೀಯ ಮಟ್ಟದಲ್ಲಿ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಲು ಸೂಚಿಸಿದ್ದೇವೆ ಅಷ್ಟೆ.

ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗಲ್ಲ. ಎಲ್ಲಾ ಪಕ್ಷದವರಿಗೂ ಸಲ್ಲುತ್ತದೆ. ಉಡುಪಿಯಲ್ಲಿ ನಮ್ಮ ಯಾವುದೇ ಶಾಸಕರು ಇಲ್ಲ. ಆದರೂ ಶೇ.80 ರಷ್ಟು ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಯೋಜನೆ ಪಕ್ಷಾತೀತವಾಗಿ ಸಿಗಲಿದೆ. ಹೀಗಾಗಿ ಬೇರೆ ಪಕ್ಷದ ಶಾಸಕರು ನಮ್ಮ ಸರ್ಕಾರ ಈ ಕೆಲಸ ಮಾಡಲಿಲ್ಲ. ನಿಮ್ಮ ಸರ್ಕಾರ ಮಾಡಿದೆ ಎಂದು ಶುಭಹಾರೈಸುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ” ಎಂದು ಉತ್ತರಿಸಿದರು.

ಕೆಪಿಸಿಸಿ ಪುನಾರಚನೆ ಶೀಘ್ರ:

ಕೆಪಿಸಿಸಿಗೆ ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ ಕೇಳಿದಾಗ, “ಕೇವಲ ಕಾರ್ಯಾಧ್ಯಕ್ಷರು ಮಾತ್ರವಲ್ಲ, ಇಡೀ ತಂಡವನ್ನೆ ಬದಲಿಸಬೇಕಿದೆ. ನಮ್ಮಲ್ಲಿ ಅನೇಕರು ಸಚಿವರಾಗಿದ್ದು, ಅವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕಿದೆ. ಹೊಸಬರಿಗೆ ಅವಕಾಶ ಮಾಡಿಕೊಡಬೇಕಿದೆ” ಎಂದು ತಿಳಿಸಿದರು.

Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?

Tweet viral: ಬಿಜೆಪಿಗರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ..!

Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ‌ ಜಿಲ್ಲೆ

- Advertisement -

Latest Posts

Don't Miss