- Advertisement -
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮತ್ತು ಇತರ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಸೇರಿ ಹಲವು ಆರೋಪಿಗಳು, ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು ನೋಡಲು ನಟ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಚಿಕ್ಕಣ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.
- Advertisement -