Thursday, June 19, 2025

Latest Posts

Chitral Rangaswamy : ನಟಿ ಚಿತ್ರಾಲ್​ಗೂ ಸ್ವಾಮಿ ಅಶ್ಲೀಲ ಸಂದೇಶ!

- Advertisement -

ಬೆಂಗಳೂರು : ನಟಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕೊಲೆಯಾಗಿರುವ ರೇಣುಕಾಸ್ವಾಮಿ, ನನಗೂ ಅಶ್ಲೀಲ ಸಂದೇಶ ರವಾನಿಸಿದ್ದ ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ ಚಿತ್ರಾಲ್ ರಂಗಸ್ವಾಮಿ, ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ. ತಮಗೂ ಈ ಅಕೌಂಟ್‌ನಿಂದ ಕೆಟ್ಟ ಸಂದೇಶ ಬಂದಿತ್ತು, ಹೀಗಾಗಿ ನಾನು ಆ ಖಾತೆಗಳನ್ನು ಬ್ಲಾಕ್ ಮಾಡಿದ್ದೆ ಎಂದು ಹೇಳಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು. ಪವಿತ್ರಾ ಗೌಡಗೆ ಅಶ್ಲೀಲ ಕಾಮೆಂಟ್ ಮಾಡುತ್ತಿದ್ದ ಮತ್ತು ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ಆತನನ್ನು ಬೆಂಗಳೂರಿಗೆ ಕರೆಸಿ, ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಈಗ ನಟ ದರ್ಶನ್ ಸೇರಿದಂತೆ 17 ಮಂದಿ ಅರೆಸ್ಟ್ ಆಗಿ, ಜೈಲು ಸೇರಿದ್ದಾರೆ. ಆದರೆ ‘ಬಿಗ್ ಬಾಸ್‌’ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಇದೀಗ ರೇಣುಕಾಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
“ಎಲ್ಲರಿಗೂ ನಮಸ್ಕಾರ, ಪ್ರಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್​ನಿಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ” ಎಂದು ತಿಳಿಸಿದ್ದಾರೆ.
“ಅಂತೆಯೇ ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು, ಬೇಸರ ಕೂಡ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ತಮ್ಮ ಬೇಸರ ಹೊರ ಹಾಕಿದ್ದಾರೆ.
ಒಟ್ನಲ್ಲಿ ಕೊಲೆಯಾದ ರೇಣುಕಾಸ್ವಾಮಿ ವಿರುದ್ಧ ಚಿತ್ರಾಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಚಿತ್ರಾಲ್ ಅವರ ರೀತಿಯಲ್ಲಿ ಪವಿತ್ರಾಗೌಡ ಮತ್ತು ದರ್ಶನ್ ಅವರು ಪೊಲೀಸರಿಗೆ ಒಂದು ದೂರು ನೀಡಿದ್ರೆ ಸಾಕಿತ್ತು. ಆದರೆ, ದರ್ಶನ್ ಆ್ಯಂಡ್ ಟೀಮ್ ಕೊಲೆ ಮಾಡಿರೋದು ನಿಜಕ್ಕು ದುರ್ದೈವದ ಸಂಗತಿ.

- Advertisement -

Latest Posts

Don't Miss