ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ ಮಾಡಿದರು.
ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು..
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರಿಗೆ ಮನವಿ ಸಲ್ಲಿಸಲು ಅವಕಾಶ ನೀಡಿ ಬೆಂಗಳೂರಿಗೆ ರೈತರನ್ನುಕರೆಸಿ ಮನವಿಯನ್ನು ಆಲಿಸಿ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಪ್ರತಿ ಟನ್ ಕಬ್ಬಿಗೆ 100 ರೂ ಹೆಚ್ಚುವರಿಯಾಗಿ ನೀಡುವಂತೆ ಆದೇಶ ಹೊರಡಿಸಲಾಗಿದೆ.ಈ ಆದೇಶದ ನಂತರ ಬೇರೆ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಮುಷ್ಕರ ಹಿಂಪಡೆದಿರುತ್ತಾರೆ. ಮಂಡ್ಯ ಜಿಲ್ಲೆಯಲ್ಲೂ ಮುಷ್ಕರ ಹಿಂಪಡೆಯುವಂತೆ ಮನವಿ ಮಾಡಿದರು.
ಇದಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ರೈತ ಸಂಘನೆಗಳ ಮುಖಂಡರು ಎಫ್.ಎ.ಪಿ ದರವನ್ನು ಸರ್ಕಾರ ಘೋಷಿಸಬೇಕಿರುವುದು ಮೂಲ ಬೇಡಿಕೆಯಾಗಿರುತ್ತದೆ. ಜಿಲ್ಲಾಡಳಿತ ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ ಮುಷ್ಕರ ಹಿಂಪಡೆಯುವ ಬಗ್ಗೆ ಮತ್ತೊಮ್ಮೆ ರೈತರೊಂದಿಗೆ ಚರ್ಚಿಸಿ ತಿಳಿಸಲಾಗುವುದು ಸಭೆಗೆ ಮಾಹಿತಿ ನೀಡಿದರು.
ಅಖರೂಟ್ ಸೇವನೆಯಿಂದ ಆಗತ್ತೆ ಆರೋಗ್ಯಕಾರಿ ಚಮತ್ಕಾರ..
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್‌ನಾಗರಾಜ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.