Hubli News: ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ನಾಲ್ಕು ನೂರಕ್ಕೂ ಹೆಚ್ಚು ಸೀಟ್ ಗೆಲ್ಲುವ ಭರವಸೆ ಇದೆ ಎಂದರು.
ಕರ್ನಾಟಕದಲ್ಲಿ ಕನಿಷ್ಠ 25-26 ಲೋಕಸಭಾ ಕ್ಷೇತ್ರದ ಚುನಾವಣೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವುದು ಶತಸಿದ್ಧ ಎಂದರು ಅವರು ಭರವಸೆ ನೀಡಿದರು.
ಬಿಜೆಪಿ ಅಸಮಾಧಾನ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಗೂಗಲ್ ಪೇ, ಫೋನ್ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್
ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ