ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news:

ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಮತ್ತೊಂದೆಡೆ ಬೊಮ್ಮಾಯಿ ಸಚಿವ ಸಂಪುಟದಲ್ಲೇ ಒಳ ಮೀಸಲಾತಿಗೆ ವಿರೋಧ ವ್ಯಕ್ತವಾಗುತ್ತಿದೆ. ಒಳಮೀಸಲಾತಿ ನೀಡುವುದನ್ನು ಆಕ್ಷೇಪಿಸಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿಗೆ ಸಚಿವ ಪ್ರಭು ಚವ್ಹಾಣ್ ಪತ್ರ ಬರೆದಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಮತ್ತು 2004ರ ಇ.ವಿ.ಚಿನ್ನಯ್ಯ ಪ್ರಕರಣದ ತೀರ್ಪನ್ನ, ಉನ್ನತ ಪೀಠ ರಚಿಸಿ ಪರಾಮರ್ಶಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

ಆತ್ಮ ಹತ್ಯಗೆ ಶರಣಾದ ಬೋಜಪುರಿ ನಟಿ ಆಕಾಂಕ್ಷಾ

ಚಿನ್ನದ ಪದಕಕ್ಕೆ ಮುತ್ತಿಟ್ಟು ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಬಾಕ್ಸರ್

About The Author