Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ ಉಪನ್ಯಾಸಕಿ ರೇಶ್ಮಾ ಭರತ್ ನಾಯಕ್ ಬೆಳಂಜಾಲೆ ಹೇಳಿದರು.
ಅವರು ಬಂಟಕಲ್ಲು ಶ್ರೀದುರ್ಗಾ ಮಹಿಳಾ ವೃಂದದ ವತಿಯಿಂದ ಬಂಟಕಲ್ಲು ಶ್ರೀದುಗಾಪರಮೆಶ್ವರೀ ದೇವಳದ ಸಭಾಂಗಣದಲ್ಲಿ ಭಾನುವಾರ ಜರುಗಿದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪರಿಸರದ ಬಡ ಪ್ರತಿಭಾವಂತ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಶ್ರಾವ್ಯಾ ಮತ್ತು ದಿವ್ಯಾ ಪ್ರಭು ರವರಿಗೆ ಅಭಿನಂದನೆ, ಪುಣೆ ಯುನಿವರ್ಸಿಟಿಯಿಂದ ಎಮ್‍ಎಸ್ಸಿ ಪರೀಕ್ಷೆಯಲ್ಲಿ ಚಿನ್ನದ ಪದಕಗಳಿಸಿದ ಪುನೀತ್ ತೆಂಡುಲ್ಕರ್, ಸುರತ್ಕಲ್ ಎನ್‍ಐಟಿಕೆ ಯುನಿವರ್ಸಿಟಿಯಿಂದ ಪಿಹೆಚ್‍ಡಿ ಸಾಧನೆ ಮಾಡಿದ ಡಾ.ಸುನೈನಾ ಶ್ರುತಿ ಶ್ರೀರಾಮ್ ಮರಾಠೆ ಇವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ಸರಸ್ವತಿ ಶ್ರೀಧರ್ ಕಾಮತ್ ವಹಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ, ಆಡಳಿತ ಮಂಡಳಿ ಅಧ್ಯಕ್ಷ ಗಂಪದಬೈಲು ಜಯರಾಮ ಪ್ರಭು, ರಾಜಾಪುರ ಸಾರಸ್ವತ ಯುವ ವೃಂದದ ಗೌರವ ಅಧ್ಯಕ್ಷ ಕೆ.ಆರ್.ಪಾಟ್ಕರ್, ಶಿರ್ವ ಸಂತಮೇರಿ ಕಾಲೇಜಿನ ಉಪ ಪ್ರಾಂಶುಪಾಲ ಡಾ.ವಿಠಲ್ ನಾಯಕ್, ವಿದ್ಯಾರ್ಥಿ ವೇತನದ ದಾನಿಗಳಾದ ಆರ್.ವಿ.ಪ್ರಭು, ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಶ್ರೀರಾಮ್ ಪಿ.ಮರಾಠೆ, ಉಡುಪಿ ಸರ್ಕಾರಿ ಮಹಿಳಾ ಕಾಲೇಜಿನ ಉಪನ್ಯಾಸಕಿ ವಸಂತಿ ವಿಠಲ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ