Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ.
ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು ಪ್ರವಾಸಿತಾಣಗಳಿಗೆ ಪ್ರವಾಸಕ್ಕೆ ಬಂದಿದ್ದಾರೆ. ಸದ್ಯ ನಿರ್ಬಂಧ ಹಿನ್ನೆಲೆ ಪ್ರವಾಸಿಗರನ್ನು ವಾಪಸ್ ಕಳಿಸಲಾಗುತ್ತಿದೆ.
ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಿಗಳಾಗಿ, 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು, ನವೆಂಬರ್ 5ರಂದು ದತ್ತಪೀಠದಲ್ಲಿ ವಿಶೇಷ ಹೋಮ-ಹವನ ನಡೆಸಲಿದ್ದಾರೆ. ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಾಗಸಾಧು ಕೂಡ ಆಗಮಿಸಲಿದ್ದಾರೆ. ಹೀಗಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠ. ಅಲ್ಲಿ ಯಾವ ಬಾಬಾಬುಡನ್ ಇಲ್ಲ. ದತ್ತಪೀಠದಲ್ಲಿ ಯಾವ ಶಾಖಾದ್ರಿಗೂ ಕೆಲಸವಿಲ್ಲ. ಶಾಖಾದ್ರಿ ನಾಗೇನಹಳ್ಳಿಗೆ ಹೋಗಿ ಅವರ ಕಾರ್ಯ ಮಾಡಿಕೊಳ್ಳಲಿ. ಶಾಖಾದ್ರಿ ಕುಟುಂಬ ಜಿಂಕೆ-ಚಿರತೆ ಕೇಸಿನಲ್ಲಿ ಸಿಕ್ಕಿಬಿದ್ದಿದ್ದಾರೆ. ದತ್ತಪೀಠದ ಹೆಸರಿನಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ. ದತ್ತಪೀಠದಲ್ಲಿರುವ ವನ್ಯಸಂಪತ್ತು ಹಾಗೂ ವನ್ಯಜೀವಿಯನ್ನ ಲೂಟಿ ಮಾಡುತ್ತಿದ್ದಾರೆ. ಶಾಖಾದ್ರಿಯಮ್ನ ಹಿಂದೂ ಧರ್ಮಪೀಠದಲ್ಲಿ ಇರಲು ಒಪ್ಪಲು ಸಾಧ್ಯವಿಲ್ಲ. ಶಾಖಾದ್ರಿಯನ್ನ ದತ್ತಪೀಠದಿಂದ ಜಿಲ್ಲಾಡಳಿತ ಹೊರ ಹಾಕುತ್ತೋ ಇಲ್ಲ ಶ್ರೀರಾಮಸೇನೆ ಹಾಕ್ಬೇಕೋ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಈ ಹಿಂದೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಕೂಡ ಆಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯದಲ್ಲಿ ಶಾಖಾದ್ರಿಗೆ ಏನು ಕೆಲಸ ಎಂದು ಶ್ರೀರಾಮಸೇನೆ ಪ್ರಶ್ನಿಸಿದೆ. ದತ್ತಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು. ಪುರುಷರು-ಮಹಿಳೆಯರು ಹಿಂದೂ ಧರ್ಮದ, ಸಂಸ್ಕೃತಿಯ ವಸ್ತ್ರಗಳನ್ನೇ ಧರಿಸಿ ಬರುವಂತೆ ಸರ್ಕಾರ ಕಾನೂನು ರಚಿಸಬೇಕು. ದತ್ತಪೀಠದಲ್ಲಿನ ಗೋರಿಗಳನ್ನ ನಾಗೇನಗಳ್ಳಿಗೆ ಸ್ಥಳಾಂತರಿಸಬೇಕು ಎಂದು ಶ್ರೀರಾಮಸೇನೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ದತ್ತಪೀಠ ಹಾಗೂ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದೆ. ಮುಂಜಾಗೃತ ಕ್ರಮವಾಗಿ ಎಸ್ಪಿ ವಿಕ್ರಂ ಅಮಟೆ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನವೆಂಬರ್ 4ರಿಂದ 6ರವರೆಗೂ ಚಂದ್ರದ್ರೋಣ ಪವರ್ತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರನ್ನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ.
‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’
ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ
‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’