ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ.
543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು. ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು ಕ್ಷೇತ್ರದಲ್ಲಿ ಅಕ್ರಮ ಹಣ ಪತ್ತೆ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆಯನ್ನು ತಡೆಹಿಡಿಯಲಾಗಿದೆ.
ಈ ಬಾರಿ ವಿವಿಪ್ಯಾಟ್ ಚೀಟಿಗಳನ್ನು ಇವಿಎಂ ಮೆಷಿನ್ ಗಳ ಜೊತೆ ತಾಳೆ ಮಾಡಲಾಗುತ್ತಿದೆ. ಒಂದು ವೇಳೆ ಕಂಟ್ರೋಲ್ ಯೂನಿಟ್ನಲ್ಲಿ ಮತಗಳು ಕಾಣಿಸದೇ ಇದ್ದರೆ, ಅದನ್ನು ಪ್ರತ್ಯೇಕವಾಗಿ ಇಟ್ಟು, ಕೊನೆಯಲ್ಲಿ ಮತ ಖಾತರಿ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ.
ಸಂಬಂಧಪಟ್ಟ ಕ್ಷೇತ್ರಗಳ ಇವಿಎಂಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಇಡಲಾಗಿದ್ದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೂತ್ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾಗುತ್ತೆ.
ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆ
ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಎಣಿಕಾ ಕೇಂದ್ರದಿಂದ ನೂರು ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಅಲ್ಲಿ ಯಾರೂ ಅನಧಿಕೃತವಾಗಿ ಓಡಾಡುವುದು, ಸಂಭ್ರಮಾಚರಣೆ ಮಾಡೋಹಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಪಟಾಕಿ ಸಿಡಿಸುವುದು, ಗೆಲುವಿನ ಮೆರವಣಿಗೆ ಮಾಡಿದ್ರೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಲಿದ್ದಾರೆ.
ಒಟ್ಟಾರೆ ಇಂದು ಇಡೀ ದೇಶವೇ ಕಾತುರಾಗಿ ಕಾದು ಕುಳಿತಿದ್ದ ದಿನ ಬಂದೇಬಿಟ್ಟಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ.
ನಾಳೆ ಕರ್ನಾಟಕದಲ್ಲಿ ಸಿಎಂ ಬದಲಾಗ್ತಾರಂತೆ…! ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ. ತಪ್ಪದೇ ನೋಡಿ.