Thursday, August 21, 2025

Latest Posts

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಕೊ*ಲೆ: ಪತ್ನಿಯ ಮೇಲೆ ಶಂಕೆ..

- Advertisement -

Bengaluru News: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್‌ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಇನ್ನು ಈ ಕೊಲೆ ಮಾಡಿದ್ದು ಯಾರು ಅನ್ನೋದು ಕೇಳಿದ್ರೆ, ಸತ್ಯಕ್ಕೂ ನಿಮಗೆ ಶಾಕ್ ಆಗತ್ತೆ. ಯಾಕಂದ್ರೆ ಈ ಕೊಲೆ ಮಾಡಿದ್ದು, ಓಂ ಪ್ರಕಾಶ್ ಅವರ ಪತ್ನಿ.

ಎಸ್.. ಮಾನಸಿಕ ಸ್ಥಿಮಿತ ಕಳೆದುಕೊಂಡ ಓಂ ಪ್ರಕಾಶ್ ಪತ್ನಿ, ಕೊಲೆ ಮಾಡಿ, ಬಳಿಕ ತಾವೇ ಪೊಲೀಸರಿಂದ ಕೊಲೆ ಮಾಡಿದ್ದಾರೆನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಓಂ ಪ್ರಕಾಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು, 2015ರ ಮಾರ್ಚ್ 1ರಂದು ರಾಜ್ಯದ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

- Advertisement -

Latest Posts

Don't Miss