- Advertisement -
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಿಸುವಂತೆ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿಕೊಡಲಾಗಿತ್ತು.
ಇದೀಗ ರಾಜ್ಯ ಸರ್ಕಾರ ಕಳುಹಿಸಿಕೊಟ್ಟಂತ ಕಡತಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಈ ಮೂಲಕ ಲೋಕಾಯುಕ್ತ ಉಪ ನ್ಯಾಯಮೂರ್ತಿ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು, ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.
- Advertisement -