Sunday, December 22, 2024

Latest Posts

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

- Advertisement -

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದರು.

ನೆರೆ ಪಿಡೀತ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಅಧಿಕಾರಿಗಳ ವರ್ಗಕ್ಕೆ ಚುರುಕು ಮುಡಿಸಲು ಬೇಟಿ ನೀಡುತ್ತಿದ್ದೆವೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಕೃಷ್ಣಭೈರೇಗೌಡ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು. ಘಟನೆ ಸಂಬಂಧ ಮೃತರ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ್ದು, ಕಂದಾಯ ಇಲಾಖೆ‌ ಅಧಿಕಾರಿಗಳ ಜೊತೆ ಸಭೆ ನಡೆಸಿ ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಚರ್ಚೆ ನಡೆಸಲಿದ್ದಾರೆ.

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

walking path: ವಾಯುವಿಹಾರಕ್ಕೆ ತೆರಳಲು ಭಯವಾಗುತ್ತಿದೆ, ಹಾವುಗಳ ಕಾಟ ಹೆಚ್ಚಿದೆ..!

Rocking star yash:ರಾಕಿಂಗ್ ಸ್ಟಾರ್ ನ ಮಲೇಷಿಯಾ ಪ್ರವಾಸ

 

- Advertisement -

Latest Posts

Don't Miss