ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಮಾನತು

Tumakuru News: ತುಮಕೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೇಲ್‌ಗಳಿಗೆ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಗೀತಮ್ಮ ಅಮಾನತ್ತಾದ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿದ್ದು, ಕರ್ತವ್ಯ ಲೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ ದಯಾನಂದ ಅವರು ಅಮಾನತಿನ ಆದೇಶ ಹೊರಡಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆ ಆದರು, ಹಾಸ್ಟೆಲ್ ಗಳಿಗೆ ಅಕ್ಕಿಯನ್ನ ಎತ್ತುವಳಿ ಮಾಡಲು ಹಿಂದೇಟು ಹಾಕಿದ್ದಾರೆಂದು ಗೀತಮ್ಮನ ಮೇಲೆ ಆರೋಪವಿತ್ತು. ಹೀಗಾಗಿ ಗೀತಮ್ಮ ಅವರನ್ನು ಅಮಾನತ್ತು ಮಾಡಲಾಗಿದೆ.

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

About The Author