Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಬಳಿಯಲ್ಲಿನ ಆರ್.ಎನ್.ಎಸ್ ಮೋಟರ್ಸ್ ಹತ್ತಿರ ನಡೆದಿದೆ.
ಝಾಕೀರ್ ಹಾಗೂ ಶಬ್ಬೀರ್ ಎಂಬುವವರ ನಡುವೆ ಗಲಾಟೆ ನಡೆದಿದ್ದು, ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿರುವ ಪರಿಣಾಮ ತಲೆಗೆ ಗಂಭೀರವಾದ ಗಾಯವಾಗಿದ್ದು, ಝಾಕೀರ್ ಎಂಬಾತ ಹಲ್ಲೆ ಮಾಡಿರುವ ಕುರಿತು ಹಲ್ಲೆಗೊಳಗಾದ ವ್ಯಕ್ತಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ಇನ್ನೂ ಗಾಯಗೊಂಡ ಶಬ್ಬೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸ್ ತನಿಖೆಯ ನಂತರವೇ ಪ್ರಕರಣದ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.




