ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಂದೀಪ್ ಮಾತನಾಡಿ, ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಾಲಾಗಿರುವವರ ಸಂಖ್ಯೆ ಮಾತ್ರ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ ಗಮನ ಹರಿಸುತ್ತಿದ್ದು, ಲಸಿಕೆ ನೀಡಲು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಪ್ರಯಾಣಿಕರ ಸ್ಕ್ರೀನಿಂಗ್, ಪಾಸಿಟಿವ್ ಬಂದ ವ್ಯಕ್ತಿಯ ಮಾದರಿಯನ್ನು ಕಡ್ಡಾಯವಾಗಿ ಜೀನೋಮ್ ಪರೀಕ್ಷೆ ಒಳಪಡಿಸುವುದು ಹಾಗೂ ಸೋಂಕಿತ ವ್ಯಕ್ತಿಗೆ ಕಡ್ಡಾಯ ಕ್ವಾರಂಟೈನ್ ಒಳಪಡಿಸುವಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಾಲಾಗುವ ಐಎಲ್ಐ ಪ್ರಕರಣಗಳನ್ನು ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಜತೆಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಿಸಬೇಕು .ಈ ವೇಳೆ ಸಿಟಿ ವ್ಯಾಲ್ಯೂವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ, ಜತೆಗೆ ಸಮುದಾಯದಲ್ಲಿ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.