Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು.
ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ ಸಂಸ್ಕೃತಿಯನ್ನು ಬಿಡಬಾರದೆಂಬ ಸಂದೇಶ ಕೊಡುತ್ತಿರುವ ನಟ ರಿಷಬ್, ವಾಷಿಂಗ್ಟನ್‌ಗೂ ಕೂಡ ಶರ್ಟು ಪಂಚೆಯಲ್ಲೇ ಹೋಗಿದ್ದರು. ಇದೇ ಉಡುಗೆಯಲ್ಲೇ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ. ಪತ್ನಿ ಪ್ರಗತಿ ಕೂಡ ಲಾಂಗ್ ದೇಸಿ ಗೌನ್‌ನಲ್ಲಿ ಮಿಂಚಿದ್ದಾರೆ.
ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆದ ಈ ಪ್ರಶಸ್ತಿ ಕಾರ್ಯಕ್ರಮವನ್ನ ಅಮೆರಿಕಾದ ಕನ್ನಡಿಗರೆಲ್ಲ ಸೇರಿ ನಡೆಸಿಕೊಟ್ಟಿದ್ದು, ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ಕಾರ್ಯಕ್ರಮ ಮಾಡಲಾಯಿತು. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ರಿಷಬ್, ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ ಎಂದಿದ್ದಾರೆ.
ಸ್ಯಾಂಡಲ್ ವುಡ್ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಜಿಮ್ಮಿ” ಚಿತ್ರದ ಕ್ಯಾರೆಕ್ಟರ್ ಟೀಸರ್ .
ಅಭಿಯಾನಕ್ಕೆ ಮಣಿದ ಮಾಲೀಕ: 7 ಸ್ಟಾರ್ ಸುಲ್ತಾರ್ ಕುರ್ಬಾನಿ ಕೊಡದಿರಲು ನಿರ್ಧಾರ