- Advertisement -
Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ.
ಸಾಕಷ್ಟು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಅಧಿಕಾರಿಗಳು ಇದಕ್ಕೆ ಸ್ಪಂದಿಸದ ಕಾರಣ, ಗ್ರಾಮ ಪಂಚಾಯತಿಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಪ್ರತಿದಿನ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
- Advertisement -

