Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಅವರು ತಿಳಿಸಿದ್ದಾರೆ.
ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ಈ ಬೃಹತ್ ಹಗರಣ ನಡೆದಿದೆ. ಅಲ್ಲದೆ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲೂ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆದರೂ, ರಾಜ್ಯ ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಅವರು ಖಂಡಿಸಿದ್ದಾರೆ.
ಮುಖ್ಯಮಂತ್ರಿಗಳು ಕೂಡಲೇ ಈ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿಂಹ ಘರ್ಜನೆ ಮಾಡುತ್ತಿರುವ ನೂತನ ಡಿ.ಸಿ.ಪಿ.ಕುಶಾಲ್ ಚೌಕ್ಸೆ
ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ