- Advertisement -
ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ ಹಲವರು ಭಾಗಿಯಾಗಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ರು.
ಡಿಬಾಸ್ ನೋಡಿ ಅಭಿಮಾನಿಗಳು ಸಿಳ್ಳೆ, ಚಪ್ಪಾಳೆ ಹಾಕಿ ಅದ್ಧೂರಿಯಾಗಿ
ದಾಸನನ್ನು ಸ್ವಾಗತಿಸಿದ್ರು. ಈ ವೇಳೆ ವೇದಿಕೆ ಮೇಲೇರಿದ ದಚ್ಚು ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅದೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಹುಬ್ಬಳ್ಳಿ ಜನತೆಗೆ ಧನ್ಯವಾದ ಹೇಳಿದ್ದಾರೆ.
- Advertisement -