Thursday, November 30, 2023

Latest Posts

ಸುಮಲತಾ ಪರ ಪ್ರಚಾರ ಮಾಡಿದೋರ ಮೇಲೆ ಕ್ರಮ ಯಾಕಿಲ್ಲ..?- ರೋಷನ್ ಬೇಗ್ ಕಿಡಿ

- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ಕಾಂಗ್ರೆಸ್ ನಾಯಕರ ವಿರುದ್ಧ ನಾನು ಹೇಳಿದ್ದೆಲ್ಲಾ ಸತ್ಯ. ಕಾಂಗ್ರೆಸ್ ಸೋಲಿಸ್ತೇವೆ ಅಂತ ಹೇಳಿದವರ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಲಿಲ್ಲ, ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಪರ ಬಹಿರಂಗವಾಗಿ ಪ್ರಚಾರ ಮಾಡಿದ್ದವರ ವಿರುದ್ಧ ಕ್ರಮ ಯಾಕೆ ತೆಗೆದುಕೊಳ್ಳಲಿಲ್ಲ, ತುಮಕೂರಲ್ಲಿ ದೇವೇಗೌಡರ ಸೋಲಿಗೆ ಕಾರಣರಾದ ರಾಜಣ್ಣ ವಿರುದ್ಧ ಕ್ರಮ ಯಾಕೆ ತೆಗೆದುಕೊಳ್ಳಲಿಲ್ಲ ಅಂತ ಪ್ರಶ್ನಿಸಿದ ರೋಷನ್ ಬೇಗ್, ನನ್ನ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಅಂತ ಅಸಮಾಧಾನ ಹೊರಹಾಕಿದ್ರು.

ಸುಮಲತಾಗೆ ಈ ಚಾನೆಲ್ ಮೇಲೆ ಯಾಕಿಷ್ಟು ಸಿಟ್ಟು…?ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=LEAHZSj6Sd8

- Advertisement -

Latest Posts

Don't Miss