ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್’ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ.

ಎರಡು ಪ್ರತ್ಯೇಕ ಎನ್’ಕೌಂಟರ್ ನಲ್ಲಿ ಗ್ಯಾಂಗ್’ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ವಿಕಾಸ್ ದುಬೆ ಹರಿಯಾಣದ ಹೋಟೆಲ್ ನಲ್ಲಿ ಕಾಣಿಸಿಕೊಂಡಿದ್ದು, ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದ. ಈ ನಡುವೆ ಆತ ಗ್ರೇಟರ್ ನೋಯ್ಡಾದಲ್ಲಿ ಕೋರ್ಟ್‌ಗೆ ಶರಣಾಗಲಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಸಿನಿಮೀಯ ಶೈಲಿಯ ಕಾರ್ಯಾಚರಣೆ ನಡೆಸಿದ ಪೊಲೀಸರು ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಿದ್ದಾರೆ.
ಅಮರ್ ದುಬೆಯನ್ನು ಹುಡುಕಿ ಕೊಟ್ಟವರಿಗೆ 25ಸಾವಿರ ಮತ್ತು ವಿಕಾಸ್ ದುಬೆಯನ್ನು ಹುಡುಕಿ ಕೊಟ್ಟವರಿಗೆ 50 ಸಾವಿರ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿತ್ತು. ಈ ಹಿನ್ನೆಲೆ ಅಮರ್ ಬಗ್ಗೆ ಬಂದ ಮಾಹಿತಿ ಪ್ರಕಾರ ಕೇಸ್‌ನ ಬೆನ್ನತ್ತಿ ಹೋದ ಪೊಲೀಸರು ಅಮರ್‌ನನ್ನು ಹುಡುಕಿ ಸ್ಥಳೀಯ ಪೊಲೀಸರ ಸಹಾಯದೊಂದಿಗೆ ವಿಕಾಸ್ ದುಬೆಯ ಆಪ್ತ ಸಹಚರನಾಗಿದ್ದ ಅಮರ್ ದುಬೆ ಎಂಬುವವನನ್ನು ಉತ್ತರಪ್ರದೇಶದ ಹಮೀರ್‌ಪುರ್ ಎಂಬಲ್ಲಿ ನಿನ್ನೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಇಂದು ವಿಕಾಸ್ ದುಬೆ ಕೂಡ ಸಿಕ್ಕಿ ಬಿದ್ದಿದ್ದಾನೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.