ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ.

ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ ಬಹುಮಾನ ನೀಡಿದ್ದಾರೆ. ಇನ್ಸ್ಪೆಕ್ಟರ್ ಗಡ್ಡೇಕರ ಹಾಗೂ ಹಿತೇಂದ್ರ [IPS] ಪಂಚಮಸಾಲಿ ಸಮುದಾಯಕ್ಕೆ 2 A ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಖುದ್ದು ADGP ಶ್ರೇಣಿಯ ಅಧಿಕಾರಿ ಫೀಲ್ಡಿಗೆ ಇಳಿದದ್ದು ಬಹುಷಃ ಇದೆ ಮೊದಲ ಬಾರಿ ಇರಬೇಕು. ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿಯನ್ನು ಸಹ ನೀಡಿದ್ದರು ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ನ್ಯಾಯಯುತವಾದ ಬೇಡಿಕೆಯನ್ನು ಲಾಠಿ ಮೂಲಕ ಉತ್ತರಿಸಿದ ಲಿಂಗಾಯತ ವಿರೋಧಿ ಹಾಗೂ ಹಿಂದೂ ವಿರೋಧಿ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ. ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಒಂದು ಕೋಮಿನ ತಪ್ಪಿತಸ್ಥರ ವಿರುದ್ಧ ಪ್ರಕರಣವನ್ನು ಕೈ ಬಿಡಬೇಕು ಎಂದು ಶಿಫಾರಸನ್ನು ಬಹುತೇಕ ಒಪ್ಪಿಕೊಂಡಿದ್ದ ಸರ್ಕಾರ, ಇಂದು ಪಂಚಮಸಾಲಿಗಳ ನೆತ್ತರು ಹರಿಸಿದವರಿಗೆ ಬಹುಮಾನ ಘೋಷಣೆ ಮಾಡಿದೆ. ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸೋಲ್ಲ ಎಂದು ಯತ್ನಾಳ್ ಅಸಮಾಧಾನ ಹೊರಹಾಕಿದ್ದಾರೆ.

https://twitter.com/BasanagoudaBJP/status/1870486089334682005

About The Author