ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ.

1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವವರು, ಗಣೇಶ ಮೂರ್ತಿಯನ್ನ ನಾಲ್ಕು ಅಡಿ ಎತ್ತರ ಮೀರದಂತೆ, ಮತ್ತು ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬಹುದು.
3.. ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲು, ಮುನಸಿಪಲ್ ಕಾರ್ಪೋರೇಶನ್/ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನ ಪಡೆಯತಕ್ಕದ್ದು. ಒಂದು ವಾರ್ಡಿಗೆ ಒಂದು ಗಣೇಶೋತ್ಸವ ಆಚರಿಸಲು ಪ್ರೋತ್ಸಾಹಿಸುವುದು.
4.. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚು ಭಕ್ತಾದಿಗಳು ಸೇರದಂತೆ ಅನುವು ಮಾಡಿಕೊಡುವುದು.
5.. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ , ಸಂಗೀತ, ನೃತ್ಯ, ಇನ್ನಿತರ ಯಾವುದೇ ಕಾರ್ಯಕ್ರಮಗಳು ನಡೆಸಕೂದು.
6.. ಶ್ರೀ ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ, ಯಾವುದೇ ಸಂದರ್ಭದಲ್ಲಾಗಲಿ, ಯಾವುದೇ ರೀತಿಯಲ್ಲಿ ಮೆರವಣಿಗೆ ಮಾಡತಕ್ಕದ್ದಲ್ಲ. ಸಂಪೂರ್ಣವಾಗಿ ನಿರ್ಭಂದಿಸಲಾಗಿದೆ.
7.. ಪಾರಂಪರಿಕ ಗಣೇಶ ಮೂರ್ತಿ ಮತ್ತು ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನ ಮನೆಯಲ್ಲೇ ವಿಸರ್ಜಿಸುವುದು. ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಿಪಿಸುವ ಗಣೇಶ ಮೂರ್ತಿಯನ್ನ ಅತೀ ಸಮೀಪವಾಗುವತಂಹ ಸ್ಥಳವನ್ನ ಬಳಸಿಕೊಂಡು, ಹೊಂಡ, ಮೊಬೈಲ್ ಟ್ಯಾಂಕ್ ಅಥವಾ ಕೃತಕ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



