Monday, April 14, 2025

Latest Posts

Roopesh Shetty | ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಗಿಚ್ಚಿ ಗಿಲಿಗಿಲಿ ಜಾಹ್ನವಿ ಜೋಡಿ

- Advertisement -

Sandalwood News : ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಈಗ ಅಧಿಪತ್ರದಲ್ಲಿ ನಾಯಕಿಯಾಗಿ ರೂಪೇಶ್ ಶೆಟ್ಟಿಗೆ ಜೋಡಿಯಾಗಿ ನಟಿಸಲಿದ್ದಾರೆ. 

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ ಎಂಬುವರು ಅಧಿಪತ್ರ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಅಧಿಪತ್ರ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಇದೇ 23 ಅಧಿಪತ್ರ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ.

ರೂಪೇಶ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿದ್ದ ತುಳು ಸಿನಿಮಾ ಸರ್ಕಸ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು ಇದೀಗ ರೂಪೇಶ್ ಹಾಗೂ ಜಾಹ್ನವಿ ಜೋಡಿಯಾಗಿ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ.

- Advertisement -

Latest Posts

Don't Miss