International News:
ರಷ್ಯಾದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಶಿಕ್ಷಕರು ಮತ್ತು ಐದು ಮಂದಿ ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ” ಎಂದು ರಷ್ಯಾದ ತನಿಖಾ ಸಮಿತಿಯು ತಿಳಿಸಿದೆ.
ತನಿಖಾಧಿಕಾರಿಗಳ ಪ್ರಕಾರ, ದಾಳಿಕೋರ ನಾಜಿ ಪಂಥದವನಾಗಿದ್ದು, ನಾಜಿ ಚಿಹ್ನೆಗಳು ಮತ್ತು ಬಾಲಾಕ್ಲಾವಾ ಹೊಂದಿರುವ ಕಪ್ಪು ಬಟ್ಟೆಯನ್ನು ಧರಿಸಿದ್ದ. ಈತನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಶಾಲೆಯಲ್ಲಿ ಸುಮಾರು 1000 ವಿದ್ಯಾರ್ಥಿಗಳು ಮತ್ತು 80 ಶಿಕ್ಷಕರು ಇದ್ದಾರೆ. ದಾಳಿ ಮಾಡಿದ ವ್ಯಕ್ತಿಯು ಕೊನೆಗೆ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
43 ವರ್ಷಗಳಲ್ಲಿ 53 ಮಹಿಳೆಯರೊಂದಿಗೆ ಮದುವೆ..! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!