Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ.
ಹೌದು.. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ. ಸಿದ್ಧಾರೂಢ ಸ್ವಾಮಿಯ ರಥೋತ್ಸವ ಗುರುವಾರ ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಮುಂದೆ ಸಾಗಿತು.
ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ ಬೀದಿಯಲ್ಲಿ ಸಾಗುತ್ತಿದ್ದಂತೆ ಅಪಾರ ಭಕ್ತಾದಿಗಳು ಹರ ಹರ ಮಹಾದೇವ ಘೋಷಣೆ ಕೂಗಿದರು. ಉತ್ತತ್ತಿ, ಬಾಳೆಹಣ್ಣು, ನಿಂಬೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಭಕ್ತರು ರಥೋತ್ಸವದ ಸಂಭ್ರಮ ಕಣ್ಣು ತುಂಬಿಕೊಂಡರು.
ಇನ್ನೂ ತೇರು ಮುಂದೆ ಸಾಗುತ್ತಿದ್ದಂತೆ ಓಂ ನಮಃ ಶಿವಾಯ, ಹರ ಹರ ಮಹಾದೇವ ಎಂಬ ಭಕ್ತರ ಉದ್ಗಾರ ಮೊಳಗಿತು. ಜಾತಿ, ಧರ್ಮದ ಸಂಕೋಲೆ ಮೀರಿದ ಜಾತ್ರೆ ಶ್ರೀಸಿದ್ಧಾರೂಢ ಹಾಗೂ ಗುರುನಾಥಾರೂಢರ ಉತ್ಸವ. ಇಂತಹದ ಸಂಭ್ರಕ್ಕೆ ಸಾಕ್ಷಿಯಾದ ಉಭಯ ಗುರುಗಳ ಮೂರ್ತಿಗಳನ್ನೂ ಅಲಂಕೃತ ತೇರಿನಲ್ಲಿಟ್ಟು ಎಳೆಯಲಾಯಿತು.