ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ ಪಲ್ಲವಿ ಹೇಳಿದ್ದರು. ಇದೀಗ ಸೈಲೆಂಟ್, ಡಿಸೆಂಬ್ ಬಾಯ್ ಜುನೈದ್ ಖಾನ್ ಜೊತೆ ಜಪಾನ್‌ ನಲ್ಲಿ ಪಾರ್ಟಿಯಲ್ಲಿ ಭಾಗವಹಿಸಿರುವ ಬಗ್ಗೆ, ಜನ ಏನೇನೋ ಮಾತನಾಡುತ್ತಿದ್ದಾರೆ.

ಆದರೆ ವಿಷಯ ಏನಪ್ಪಾ ಅಂದ್ರೆ, ಸಾಯಿ ಪಲ್ಲವಿ ಮತ್ತು ಜುನೈದ್ ಖಾನ್ ಸಿನಿಮಾ ಶೂಟಿಂಗ್‌ಗೆ ಜಪಾನ್‌ಗೆ ತೆರಳಿದ್ದಾರೆ. ಎರಡು ವಾರಗಳ ಹಿಂದೆಯೇ, ಶೂಟಿಂಗ್ ಶುರುವಾಗಿತ್ತು. ಜುನೈದ್‌ಗೆ ಇದು ಮೊದಲನೇಯ ಸಿನಿಮಾ ಆಗಿದ್ದು, ಈ ಸಿನಿಮಾದಲ್ಲಿ ಸಾಾಯಿ ಪಲ್ಲವಿ ನಾಯಕಿಯಾಗಿದ್ದಾರೆ. ಹಾಗಾಗಿ ಇವರಿಬ್ಬರು ಸೇರಿ, ಸಿನಿಮಾ ತಂಡ ಜಪಾನ್‌ನಲ್ಲಿ ಬೀಡುಬಿಟ್ಟಿದೆ.

ಶೂಟಿಂಗ್ ಮುಗಿದ ಖುಷಿಗೆ ಚಿತ್ರತಂಡ ಜಪಾನ್‌ನಲ್ಲಿ ಪಾರ್ಟಿ ಮಾಡಿದ್ದು, ಇದರಲ್ಲಿ ಸಾಯಿ ಪಲ್ಲವಿ ಮತ್ತು ಜುನೈದ್ ಎಂಜಾಯ್ ಮಾಡಿದ್ದಾರೆ. ಇದೇ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ಕೊಡಬೇಕಂತೆ 1 ಸಾವಿರ ರೂಪಾಯಿ..

ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..

ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ

About The Author