Sunday, October 20, 2024

Latest Posts

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

- Advertisement -

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ.

2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ಬೃಹತ್‌ ಹೋರಾಟ ನಡೆಸಿದ್ದರು. ಆದ್ರೀಗ ಆಗಿನ ಬಿಜೆಪಿ ಸಚಿವ ಸಂಪುಟ ತೆಗೆದುಕೊಂಡಿದ್ದ ನಿರ್ಣಯದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾವತ್ತು ಅನುಮೋದನೆ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಸಂಡೂರು ತಾಲೂಕಿನ ತೋರಣಗಲ್ಲು ಮತ್ತು ಕುರೇಕುಪ್ಪ ಗ್ರಾಮಗಳಲ್ಲಿ 2000.58 ಎಕರೆ ಭೂಮಿಯನ್ನು ಪ್ರತಿ ಎಕರೆಗೆ ₹1,22,200 ರಂತೆ ಮತ್ತು ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.75 ಎಕರೆ ಭೂಮಿಯನ್ನು ಪ್ರತಿ ಎಕರೆಗೆ ₹1,50,635 ಅನ್ನು ಅಂತಿಮ ಬೆಲೆಯಾಗಿ ನಿಗದಿಪಡಿಸಲಾಗಿದೆ.

2021ರ ಏಪ್ರಿಲ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿಕೊಡಲು ತೀರ್ಮಾನಿಸಲಾಗಿತ್ತು. ಆಗ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದ ಅಂದಿನ ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ‘2006ರಲ್ಲಿ ಜಿಂದಾಲ್‌ ಕಂಪನಿಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಜಮೀನು ನೀಡಲಾಗಿತ್ತು. ಗಣಿಗಾರಿಕೆಗೆ ನೀಡಿದ್ದ ಆ ಜಾಗವನ್ನು ಬಳಕೆ ಮಾಡಿದ್ದಾರೆ ಮತ್ತು ಅಲ್ಲಿ ಕಾರ್ಖಾನೆ, ಕಟ್ಟಡಗಳನ್ನು ಸ್ಥಾಪಿಸಿದ್ದಾರೆ. ಗುತ್ತಿಗೆ ಅವಧಿ ಮುಗಿದಿರುವುದರಿಂದ ಶುದ್ಧಕ್ರಯ ಮಾಡಲು ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಪ್ರಸ್ತಾವನೆ ಸಲ್ಲಿಸಲಾಗಿತ್ತು’ ಎಂದು ಹೇಳಿದ್ದರು.

ಜಿಂದಾಲ್ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಮಾರಾಟ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇದೀಗ ಸ್ವಪಕ್ಷದಲ್ಲೇ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ನಿರ್ಧಾರಕ್ಕೆ ಕೆಲ ಸಚಿವರು, ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Latest Posts

Don't Miss