www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಸಲೀಂರನ್ನು ಉಚ್ಚಾಟಿಸಿದ್ದು, ಮಾಜಿ ಸಂಸದ ವಿ.ಎಸ್ ಉಗ್ರಪ್ಪಾಗೆ ನೋಟೀಸ್ ನೀಡಲಾಗಿದೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗೆ ಕಾರಣ ಕೇಳಿ ಕೆಪಿಸಿಸಿ ನೋಟಿಸ್ ಜಾರಿಮಾಡಿದೆ.
ದೆಹಲಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಪ್ರತಿಕ್ರಿಯೆ ನೀಡಿ, ಉಗ್ರಪ್ಪ, ಸಲೀಂ ಮಾತುಕತೆ ಬಗ್ಗೆ ವಿವರವಾದ ಮಾಹಿತಿ ಇಲ್ಲ. ಅದಕ್ಕಾಗಿ ನಾನು ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ. ಮಾಧ್ಯಮ ವಿಭಾಗದಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಟಿವಿ- ಬೆಂಗಳೂರು