Technology News:
ಇದೀಗ ಯಾವುದೇ ಫೋನ್ ಬಿಡುಗಡೆ ಮಾಡದೆ ಅಚ್ಚರಿ ಎಂಬಂತೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎ32 ಸ್ಮಾರ್ಟ್ಫೋನ್ ಬೆಲೆಯಲ್ಲಿ ಕಡಿತ ಮಾಡಿದೆ. ಸ್ಯಾಮ್ಸಂಗ್ ಕಂಪನಿಯು ಗ್ಯಾಲಕ್ಸಿ A32 ಫೋನ್ ಕಳೆದ ವರ್ಷ ನವೆಂಬರ್ನಲ್ಲಿ ಭಾರತದಲ್ಲಿ ಬಿಡುಗಡೆ ಆಗಿತ್ತು. ಇದೀಗ ಇದರ ಒಂದು ವೇರಿಯಂಟ್ನಲ್ಲಿ ಬರೋಬ್ಬರಿ 3,500 ರೂ. ಗಳನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬೆಲೆ ಇಳಿಕೆಯಿಂದಾಗಿ ಈ ಫೋನಿನ 8GB RAM + 128GB ಸ್ಟೋರೆಜ್ ಸಾಮರ್ಥ್ಯದ ಬೆಲೆ 19,999 ರೂ. ಆಗಿದೆ. ಈ ಫೋನ್ 23,499 ರೂ. ಗೆ ಅನಾವರಣಗೊಂಡಿತ್ತು ಎನ್ನಲಾಗಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ A32 ಫೋನ್ನ ಕ್ಯಾಮೆರಾದಲ್ಲಿ 64 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಧಾನ ಸೆನ್ಸರ್ ಇದ್ದು, 8MP ಆಲ್ಟ್ರಾ ವೈಡ್ ಆ್ಯಂಗಲ್ ಲೆನ್ಸ್ ಹಾಗೂ ತಲಾ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್ ಲೆನ್ಸ್ಗಳಿವೆ. ಸೆಲ್ಫೀಗೆ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಮುಂಭಾಗದ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಪ್ರಧಾನ ಕ್ಯಾಮೆರಾವು ಹೊರಾಂಗಣದಲ್ಲಿ ಅದ್ಭುತವಾಗಿ ಬಣ್ಣಗಳ ಮಿಳಿತದೊಂದಿಗೆ ಚಿತ್ರಗಳನ್ನು ಸೆರೆಹಿಡಿಯುತ್ತದೆ ಎನ್ನಲಾಗಿದೆ.




