ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತಾಡಿದ್ದಾರೆ ಎಂದರು.
ಇನ್ನು ಬಿಜೆಪಿಯವರು ಹೋರಾಟ ಮಾಡಲಿ ನಾವು ಉತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಬರಗಾಲದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಶೀಘ್ರವೇ ಬರಗಾಲ ಘೋಷಣೆ ಮಾಡಲಾಗವುದು, ಜೊತೆಗೆ ಕೇಂದ್ರಕ್ಕೂ ವರದಿ ಕಳಿಸ್ತೀವಿ ಎಂದು ಗೃಹ ಸಚಿವರು ತಿಳಿಸಿದರು.
ಗದಗನಲ್ಲಿ ಹೊಸದಾಗಿ ಕಮಾಂಡೋ ಸೆಂಟರ್ ಮಾಡಿದ್ದಾರೆ. ಹಾಗಾಗಿ ಗದಗಕ್ಕೆ ಹೋಗ್ತೀದಿನಿ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನಾದರೂ ಬೇರೆ ಕಾನೂನು ಇದೆಯಾ.?? ಎಂದು ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ ಮಾಡಿದರು.
Praladh Joshi: ಮುಸ್ಲಿಂ ಲೀಗ್ ದೇಶವನ್ನೇ ವಿಭಜನೆ ಮಾಡಿದೆ, ನರಮೇಧವಾಗಿದೆ..!