ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು.

ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ ತಾರಾ ಸೇರಿ ಹಲವು ಗಣ್ಯರು ಮತ್ತು ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ನಂತರ ವಿಶೇಷ ವಾಹನದಲ್ಲಿ ಚಿರು ಪಾರ್ಥೀವ ಶರೀರದ ಮೆರವಣಿಗೆ ನಡೆದಿದ್ದು, ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಲಾಯಿತು.

https://youtu.be/heeTOl08S0Q

About The Author