Sandalwood: ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾರ್

Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ.

ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ನೀಡಿದರು.

ಆ ಬಳಿಕ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಈ ಪದವಿ ಸಿಕ್ಕಿದ್ದು ನನ್ನ ಪುಣ್ಯ. ಅದನ್ನು ರಾಘವೇಂದ್ರ ಸ್ವಾಮೀಗಳ ಪಾದಕ್ಕೆ ಅರ್ಪಿಸುವೆ. ನಾನು ಜನಿಸಿದಾಗ, ತಂದೆ ಮಂತ್ರಾಲಯ ಸಿನಿಮಾ ಮಾಡುತ್ತಿದ್ದರು. ಆಗ ನನಗೆ ರಾಘವೇಂದ್ರ ಅಂತಾ ಹೆಸರಿಟ್ಟಿದ್ದರು. ಇದೀಗ ನಾನು ಡಾ.ರಾಘವೇಂದ್ರ ರಾಜ್‌ಕುಮಾರ್ ಆಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಪ್ರಶಸ್ತಿ ಸ್ವೀಕರಿಸಿದ ನಂತರ, ಜವಾಬ್ದಾರಿ, ಭಯ ಹೆಚ್ಚಾಗಿದೆ. ಏನು ಸಾಧನೆ ಮಾಡದವನಿಗೆ ಈ ಪ್ರಶಸ್ತಿ ಯಾಕೆ ಅಂತಾ ಅನ್ನಿಸುತ್ತದೆ. ದೇವರ ಆಶೀರ್ವಾದದಿಂದ ಇದು ನನಗೆ ಸಿಕ್ಕಿದೆ ಎಂದು ನಾನು ತಿಳಿದಿದ್ದೇನೆ. ನನ್ನ ತಂದೆ ತಾಯಿ ಆಶೀರ್ವಾದ ಮಾಡಿ, ಈ ಗೌರವ ಕ“ಡಿಸಿದಂತಾಗಿದೆ. ಇನ್ನು ಮುಂದೆ ನಾನು ಸಮಾಜದ ಜನರ ಜತೆ ಬೆರೆತು ಸೇವೆ ಮಾಡುತ್ತೇನೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ.

About The Author