political news
ಯೆಸ್ ಸ್ನೇಹಿತರೆ
ಬಹು ಕಾಲದಿಂದಲೂ ಚಿತ್ರತಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ನಟ ಅನಂತನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ( ಫೆಬ್ರುವರಿ 22) ರಂದು ಬೆಂಗಳೂರಿಬನ ಮಲ್ಲೆಶ್ವರಂ ಜಗನ್ನಾಥ ಭವನದಲ್ಲಿ( ಬಿಜೆಪಿ ಕಛೇರಿಯಲ್ಲಿ) ಸಮಾವೇಶ ಮಾಡುವ ಮೂಲಕ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು
ಈ ಹಿಂದೆ ಜೆ ಹೆಚ್ ಪಟೇಲ್ ಸರ್ಕಾರದ ಅವಧಿಯಲ್ಲಿ ಶಾಸಕರಾಗಿ ಸಚಿವರಾಗಿ ವಿಧಾನಪರಿಷತ್ ಸದಸ್ಯರಾಗಿ ರಾಜಕೀಯದಲ್ಲಿ ಸೇವೆ ಸಲ್ಲಿಸಿದರು. 2004 ರಲ್ಲಿ ಚಾಮರಾಜಪೇಟೆ ವಿಧಾನಸಭಾಕ್ಷೇತ್ರದಿಂದ ಸ್ಪರ್ದೆಮಾಡಿ ಸೋತಿದ್ದರು
ಸಿನಿಮಾರಂಗದಲ್ಲಿ ಮಾತ್ರವಲ್ಲದೆ ರಾಜಕೀಯ ರಂಗದಲ್ಲಿಯೂ ಅನುಭವ ಹೊಂದಿರುವ ಅವರು ಏಭಾರಿ ಭಾಅರತೀಯ ಜನತಾ ಪಾರ್ಟಿ ಸೇರುವ ಮೂಲಕ ಮತ್ತೆ ರಾಜಕೀಯ ಪ್ರವೇಶ ಮಾಡಲಿದ್ದಾರೆ. ನಟ ಅನಂತನಾಗ್ ಅವರು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಸ್ಪರ್ದೇ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ನಾಯಕರು ಕರ್ನಾಟಕದಲ್ಲಿ ಭಾರೀ ಪ್ರಚಾರದಲ್ಲಿ ತೊಡಗಿದ್ದಾರೆ. ನಡ್ಡಾ ಅವರು ಮಂಗಳೂರು, ಉಡುಪಿ, ಚಕ್ಕಮಗಳೂರು ಹಾಸನದ ಕಾರ್ಯಕ್ರಮಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾಗಿಯಾಗಿದ್ದರು. ಮುಂದಿನ ಸೋಮವಾರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ.ಈ ಮಧ್ಯೆ, ಮಂಡ್ಯದಲ್ಲಿಂದು ಬಿಜೆಪಿ ಯುವ ಸಮಾವೇಶ ನಡೆಯಲಿದ್ದು, ಐವತ್ತು ಸಾವಿರ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ ಎನ್ನಲಾಗಿದೆ.
ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !