ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಚಿಕ್ಕಣ್ಣ ಏನ್ ಹೇಳಿದ್ರು ಅಂತ ಮುಂದೆ ಓದಿ.
ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವಂತ ಹಾಸ್ಯ ನಟ ಚಿಕ್ಕಣ್ಣ, ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿಯನ್ನು ಕೇಳಿ ಅನೇಕರು ಕರೆ ಮಾಡುತ್ತಿದ್ದಾರೆ. ಹಲವು ಅಭಿಮಾನಿಗಳು ಗಾಬರಿಗೊಂಡಿದ್ದಾರೆ. ವೈರಲ್ ಆಗಿರುವಂತ ಸುದ್ದಿ ಸುಳ್ಳು. ಅದು ಸತ್ಯಕ್ಕೆ ದೂರವಾಗಿದ್ದು. ನಾನು ಆರೋಗ್ಯವಾಗಿದ್ದೇನೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವಂತ ಸುದ್ದಿ ಸುಳ್ಳಾಗಿದೆ. ಯಾರೋ ಕಿಡಿಗೇಡಿಗಳು ಹೀಗೆ ಸುದ್ದಿ ಹರಿ ಬಿಟ್ಟಿದ್ದಾರೆ. ನಾನು ಉಪಾಧ್ಯಕ್ಷ ಸಿನಿಮಾ ಶೂಟಿಂಗ್ ನಲ್ಲಿ ಇದ್ದೇನೆ. ಆ ಸ್ಥಳದಿಂದಲೇ ವೀಡಿಯೋ ಬಿಡುಗಡೆ ಮಾಡ್ತಾ ಇದ್ದೇನೆ. ನನ್ನ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ. ಗಟ್ಟಿಮುಟ್ಟಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇದೆ ಎಂದು ಹೇಳಿದ್ದಾರೆ.




