Sandalwood News: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಸುತ್ತಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್ ಹಾಜರಾಗಿದ್ದರು. ವಿಚಾರಣೆ ಸಂದರ್ಭದಲ್ಲಿ ನಾಗರತ್ನ ಜೊತೆ ಬಾಳಲು ನನ್ನಿಂದ ಸಾಧ್ಯವಿಲ್ಲ ಎಂದು ವಿಜಯ್ ಹೇಳಿದ್ದರಂತೆ. ಅಲ್ಲದೆ ನಾಗರತ್ನ ಜೊತೆ ಬಾಳೋಲೆ ಸಾಧ್ಯವಿಲ್ಲ. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದು ವಿಜಯ್ ಹೇಳಿದ್ದರು. ಜೀವನಾಂಶ ನೀಡಿರುವ ದಾಖಲೆ ಕೊಡಿ ಎಂದು ನಾಗರತ್ನ ಕೇಳಿದ್ದರು. ಅಲ್ಲದೆ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ನಾಗರತ್ನ ಹೇಳುತ್ತಿದ್ದರಂತೆ. ಈ ಹಿನ್ನಲೆ ವಿಜಯ್ ಸಲ್ಲಿಸಿದ್ದ ವಿಚ್ಛೇದನ ಅರ್ಜಿ ವಜಾಗೊಂಡಿದೆ.
ದುನಿಯಾ ವಿಜಯ್ ಹಿರಿಯ ಪುತ್ರಿ ರಿತನ್ಯಾ ವಿಜಯ್ ಮೊದಲ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಎರಡನೇ ಪುತ್ರಿ ಮೋನಿಕಾ ವಿದೇಶದಲ್ಲಿ ಸಿನಿಮಾಗಳ ಬಗ್ಗೆ ವ್ಯಾಸಂಗ ಮಾಡುತ್ತಿದ್ದಾರೆ. ಪುತ್ರ ಸಾಮ್ರಾಟ್ ವಿದ್ಯಾಭ್ಯಾಸ ಮುಂದುವರೆಸುತ್ತಿದ್ದಾರೆ.
ಯಡಿಯೂರಪ್ಪ ಬಂಧನ? ಪೋಕೋ ಕೇಸ್ನಲ್ಲಿ ಬಿಎಸ್ವೈ ಬಂಧನಕ್ಕೆ ಸಿದ್ಧತೆ..!