Wednesday, December 11, 2024

Latest Posts

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

- Advertisement -

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ.

ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು ನಟ ದರ್ಶನ್‌ರನ್ನು ವಶಕ್ಕೆ ಪಡೆದಿದ್ದಾರೆ.

ಸ್ಯಾಂಡಲ್​ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮೈಸೂರಿನ ತೋಟದ ಮನೆಯಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ.

ರೇಣುಕಾಸ್ವಾಮಿ ಎಂಬುವವರ ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ಹೆಸರು ತಳಲು ಹಾಕಿಕೊಂಡಿದ್ಧಾರೆ. ರೇಣುಕಾಸ್ವಾಮಿ ಹತ್ಯೆ ಮಾಡಲು ದರ್ಶನ್ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಪವಿತ್ರಗೌಡ ಕುರಿತು ಕೆಟ್ಟದಾಗಿ ಮೆಸೇಜ್ ಹಾಗೂ ಸಂದೇಶವನ್ನು ರೇಣುಕಾಸ್ವಾಮಿ ಕಳುಹಿಸಿದ್ದ. ಹೀಗಾಗಿ, ರೇಣುಕಾಸ್ವಾಮಿಯ ಕೊಲೆಯಾಗಿತ್ತು. ಕೊಲೆ ಆರೋಪಿ ಜೊತೆ ದರ್ಶನ್ ಸಂಪರ್ಕದಲ್ಲಿದ್ದರು. ಹೀಗಾಗಿ, ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ಕೆಲವೇ ಕ್ಷಣಗಳಲ್ಲಿ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಪ್ರಡ್ಯೂಸ್ ಮಾಡಿ, ನಂತರ ವಶಕ್ಕೆ ಪಡೆಯಲಾಗುತ್ತದೆ.

ಈ ರೇಣುಕಾಸ್ವಾಮಿ ಯಾರು? ಆತ ಯಾಕೆ ಪವಿತ್ರಾಗೌಡ ಕುರಿತು ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಅಲ್ಲದೇ, ದರ್ಶನ್ ಯಾಕೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Sandalwood News: ಆ 3ನೇ ವ್ಯಕ್ತಿ ಕುರಿತು ನಿವೇದಿತಾ ಹೇಳಿದ್ದೇನು?

Sandalwood News: ಯುವ ರಾಜ್​ಕುಮಾರ್ ವಿಚ್ಛೇದನ- ಪತ್ನಿ ಶ್ರೀದೇವಿ ಸ್ಫೋಟಕ ಹೇಳಿಕೆ

ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

- Advertisement -

Latest Posts

Don't Miss