Saturday, July 12, 2025

Latest Posts

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

- Advertisement -

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss