Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತೆ ಎದು ಆಶಿಸುವೆ ಎಂದು ಕರ್ನಾಟಕ ಬಾಕ್ಸ್ ಆಫೀಸ್ ಟ್ವೀಟ್ ಮಾಡಿದ್ದು, ಅದನ್ನು ರಮ್ಯಾ ಅವರು ಶೇರ್ ಮಾಡಿದ್ದಾರೆ. ಈ ಮೂಲಕ ಕಾನೂನಿ ಬಲೆಯಿಂದ ಯಾರು ತಪ್ಪಿಸಿಕೊಳ್ಳಲು ಆಗಲ್ಲ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ರಮ್ಯಾ ತಿಳಿಸಿದ್ದಾರೆ.

ಇನ್ನೂ ಬೆಳಗ್ಗೆ 8.30ಕ್ಕೆ ದರ್ಶನ್ ಅವರು ಜಿಮ್ ಮಾಡುವಾಗ ಪೊಲೀಸರು ಅರೆಸ್ಟ್ ಮಾಡಿದ್ದು, ಟ್ವಿಟರ್​ನಲ್ಲಿ ಡಿಬಾಸ್​ ಅವರು ಟ್ರೆಂಡ್​ನಲ್ಲಿದ್ದಾರೆ.

ಚಿತ್ರದುರ್ಗ ಮೂಲದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್, ಫೋಟೋ ಕಳಸಿದ್ದನು. ಈ ಹಿನ್ನೆಲೆಯಲ್ಲಿ ಜೂನ್​ 9 ರಂದು ರೇಣುಕಾಸ್ವಮಿ ಅವರನ್ನು ಕಾಮಾಕ್ಷಿಪಾಳ್ಯದಲ್ಲಿ ಕೊಲೆ ಮಾಡಲಾಗಿತ್ತು.ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಕರಣ ತನಿಖೆ ನಡೆಸಿದ್ದು, ಮೊದಲು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇವರನ್ನು ವಿಚಾರಣೆ ನಡೆಸಿದಾಗ ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೆ ಘಟನೆ ನಡೆಯುವ ವೇಳೆ ಸ್ಥಳದಲ್ಲಿ ನಟ ದರ್ಶನ್ ಕೂಡ​ ಇದ್ದರು ಎಂಬ ಮಾಹಿತಿ ಪೊಲೀಸರಿಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಪೊಲೀಸರು ಆರೋಪಿ ನಟ ದರ್ಶನನ್ನು ಬಂಧಿಸಿದ್ದಾರೆ.

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

About The Author