Wednesday, December 11, 2024

Latest Posts

Sandalwood News: ಟಾಕ್ಸಿಕ್ ಸಿನಿಮಾ ವಿರುದ್ಧ ಎಫ್ಐಆರ್: ಯಶ್ ಸಿನಿಮಾಗೆ ಕಂಟಕ

- Advertisement -

Sandalwood News: ಕನ್ನಡದ ನಟ ಯಶ್‌ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮಾಡಲು ಎಚ್ಎಂಟಿಯಲ್ಲಿದ್ದ ಮರ-ಗಿಡಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.

ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿನ್ , ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗು ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಮರಗಳ ಮಾರಣ ಹೋಮದ ಆರೋಪ ಕೇಳಿ ಬಂದಿದ್ದರಿಂದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದರು.

ಆಗ, ಯಾರು ಶೂಟಿಂಗ್ ಗಾಗಿ ಮರ ಗಿಡಗಳನ್ನು ಕಡಿಯಲು ಅನುಮತಿ ನೀಡಿದ್ದರು. ಯಾರು ಈ ಕೃತ್ಯ ನಡೆಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪತ್ರದ ಆದೇಶದ ಮೇಲೆ, ಅರಣ್ಯ ಅಧಿಕಾರಿಗಳು, ವಿಚಾರಣೆ ನಡೆಸಿ, ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗಾಗಿಯೇ ಮರಗಿಡ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಎಚ್ಚರಿಸಿದ್ದರು.

- Advertisement -

Latest Posts

Don't Miss