Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ.
800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು ಆರ್ಥಿಕವಾಗಿ ಅಷ್ಟೇನೂ ಸದೃಢರಾಗಿರಲಿಲ್ಲ.
ಅವರ ಹೆಸರ ಮುಂದೆ ಬ್ಯಾಂಕ್ ಹೆಸರಿತ್ತು. ಆದರೆ ಅವರ ಬ್ಯಾಂಕ್ ಖಾತೆಯಲ್ಲಿ ಏನೂ ಇರುತಗತಿರಲಿಲ್ಲ ಅಂತ ಹಿಂದೆ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಆರಂಭದಲ್ಲಿ ಬ್ಯಾಂಕ್ ಕೆಲಸದಲ್ಲಿದ್ದರು. ಅದರ ಹೊಯೆಯಲ್ಲೇ ಜನಾರ್ಧನ್ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆದರೆ ಅವಕಾಶಗಳು ಹೆಚ್ಚಾದಾಗ ಅನಿವಾರ್ಯವಾಗಿ ಬ್ಯಾಂಕ್ ಕೆಲಸ ಬಿಡುವಂತಾಯಿತು. 90ರ ದಶಕದ ಆರಂಭದಲ್ಲೇ ಸಿನಿಮಾಗಳಲ್ಲಿ ನಟಿಸೋಕೆ ಆರಂಭಿಸಿದ ಜನಾರ್ಧನ್ 11 ವರ್ಷಗಳ ಬಳಿಕ ಕೆಲಸ ಬಿಟ್ಟು ಸಂಪೂರ್ಣವಾಗಿ ಸಿನಿಮಾಗಳಲ್ಲಿ ನಿರತರಾಗಿದ್ದರು.
ಆಗ ಜನಾರ್ಧನ್ ಎಂಬ ಹೆಸರಿನ ಸಾಕಷ್ಟು ಜನ ಆಗ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದರು. ಹಾಗಾಗಿ ವಿಭಿನ್ನವಾಗಿರಲಿ, ಗುರುತಿಸಲು ಸುಲಭವಾಗಲಿ ಎನ್ನುವ ಕಾರಣಕ್ಕೆ ಬ್ಯಾಂಕ್ ಜನಾರ್ಧನ್ ಎಂದು ಬದಲಿಸಿಕೊಂಡಿದ್ದರು.