Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಇದ್ದಕ್ಕಿದ್ದಂತೆ ಬೇರೆಯಾಗುತ್ತಿರುವುದು ಯಾಕೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಪತ್ನಿ ವಿರುದ್ಧ ಮಾನಸಿಕ ಕಿರುಕುಳ, ಕ್ರೌರ್ಯ ಹಾಗೂ ಅಗೌರವದಿಂದ ನೋಡಿಕೊಂಡ ಆರೋಪವನ್ನು ಯುವ ರಾಜ್ಕುಮಾರ್ ಮಾಡಿದ್ದಾರೆ. ನಿಜಕ್ಕೂ ಸಣ್ಣ-ಪುಟ್ಟ ಸಮಸ್ಯೆಯಾಗಿದ್ರೆ ರಾಜ್ ಫ್ಯಾಮಿಲಿಯೇ ಒಂದಾಗಿ ಸಮಸ್ಯೆಯನ್ನು ಬಗೆಹರಿಸಬಹುದಾಗಿತ್ತು ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
7 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾದೆ. ಜೂನ್ 6ರಂದು ಬೆಂಗಳೂರಿನ ಕೌಟುಂಬಿಕ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಶ್ರೀದೇವಿ ಅವರಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸದ್ಯ ಶ್ರೀದೇವಿ ಅವರು ಅಮೆರಿಕಾದಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಸದ್ಯ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಅವರು ದೊಡ್ಮನೆಯಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಯಾವಾಗ ನಟ ಯುವ ವಿಚ್ಛೇದನ ಅರ್ಜಿ ಸಲ್ಲಿಸಿದ್ರೋ ಅಂದಿನಿಂದ ಅಮೆರಿಕದಲ್ಲಿದ್ದಾರೆ. ಅಲ್ಲಿಂದಲೇ ಅವರು ಮಾತುಕತೆ ಮೂಲಕ ವಿಚ್ಛೇದನಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ. ಈ ಮೂಲಕ ಅಧಿಕೃತವಾಗಿ ವಿಚ್ಛೇದನ ಪಡೆಯಲು ಯುವ ದಂಪತಿ ನಿರ್ಧಾರ ಮಾಡಿದೆ ಎಂದು ವರದಿಯಾಗಿದೆ.
ಕಳೆದ ಒಂದು ವರ್ಷದಿಂದ ಯುವರಾಜಕುಮಾರ್ ಹಾಗೂ ಶ್ರೀದೇವಿ ನಡುವೆ ಕಲಹ ಇತ್ತು ಎನ್ನಲಾಗಿದೆ. ಕಳೆದ ಆರು ತಿಂಗಳಿನಿಂದ ಇಬ್ಬರೂ ಸಂಸಾರ ಮಾಡಿಕೊಂಡಿಲ್ಲ. ಯುವ ಹಾಗೂ ಶ್ರೀದೇವಿ ದಾಂಪತ್ಯದಲ್ಲಿ ಮೂಡಿರುವ ಕಲಹವನ್ನು ಎರಡೂ ಕುಟುಂಬಗಳು ಪರಿಹರಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.
ಯುವ ರಾಜ್ ಕುಮಾರ್ ಕಡೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿದೆ. ಶ್ರೀದೇವಿ ಅವರ ಮುಂದಿನ ನಡೆ ಏನು ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಶ್ರೀದೇವಿ ಅವರು, ಯುವ ರಾಜ್ಕುಮಾರ್ ಅವರು ಕಳುಹಿಸಿರುವ ಲೀಗಲ್ ನೋಟಿಸ್ಗೆ ಉತ್ತರ ಕೊಟ್ಟಿದ್ದೇನೆ. ಕೋರ್ಟ್ ನೋಟಿಸ್ ನನ್ನ ಕೈಸೇರಿಲ್ಲ. ಸದ್ಯಕ್ಕೆ ನಾನು ಏನು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ ರಾಜ್ಕುಮಾರ್ ವಿಚ್ಛೇದನ ಕುರಿತು ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.
ಇದೇ ವೇಳೆ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಯುವ ಡಿವೋರ್ಸ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿದುಕೊಂಡು ಮಾತನಾಡುತ್ತೇವೆ. ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಶ್ರೀದೇವಿ ಭೈರಪ್ಪ ಅವರು ನಟನೆಯಿಂದ ದೂರ. ಡಾ.ರಾಜ್ಕುಮಾರ್ ಅಕಾಡೆಮಿ ನಡೆಸುತ್ತಿದ್ದ ಅವರು ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ಪರಿಚತವಾಗಿದ್ದಾರೆ. ಮೈಸೂರಿನ ನಿರ್ಮಲಾ ಕಾನ್ವೆಂಟ್ ಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿರುವ ಅವರು, ಮೈಸೂರು ವಿವಿಯಲ್ಲಿ ಬಿಸ್ನೆಸ್ ಮ್ಯಾನೇಜ್ಮೆಂಟ್ನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಇದಾದ ಬಳಿಕ ಮಣಿಪಾಲದಲ್ಲಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಸ್ನಾತಕ ಪದವಿ ಪಡೆದಿದ್ದಾರೆ.
ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು, ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!
ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!