Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಚಾಮುಂಡೇಶ್ವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದು, ದೇವಿಯ ಆಶೀರ್ವಾದ ಪಡೆದಿದ್ದಾರೆ.
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ 2024 ಜೂನ್ನಲ್ಲಿ ಜೈಲು ಸೇರಿದ್ದರು. ಬಳಿಕ ಅನಾರೋಗ್ಯ ನಿಮಿತ್ತ ಜಾಮೀನಿನ ಮೇಲೆ ಆಚೆ ಇದ್ದಿದ್ದರು. ಆದರೆ ಬಳಿಕ ಮತ್ತೆ 2025ರ ಆಗಸ್ಟ್ನಲ್ಲಿ ದರ್ಶನ್ನನ್ನು ಬಂಧಿಸಿ, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರಿಸಲಾಗಿದೆ. ವಿಜಯಲಕ್ಷ್ಮೀ ದರ್ಶನ್ ಕೂಡ ಪತಿಯನ್ನು ಆಚೆ ತರಲು ಶತ ಪ್ರಯತ್ನ ಮಾಡುತ್ತಿದ್ದಾರೆ.
ಇನ್ನು ಇಂದು ಆಷಾಢ ಶುಕ್ರವಾರದ ಶುಭ ದಿನವಾದ ಕಾರಣ, ಚಾಮುಂಡಿ ತಾಯಿ ನಾಾಗಲಕ್ಷ್ಮೀ ಅಲಂಕಾರದಲ್ಲಿ ದರ್ಶನ ನೀಡಿದ್ದಾರೆ. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಿಂದಲೇ ಭಕ್ತಾದಿಗಳು ದೇವರ ದರ್ಶನಕ್ಕಾಗಿ ಬಂದಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.




