ನವದೆಹಲಿ: ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ.
ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ನಂತರ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ರಾಹುಲ್ ತಂಡದೊಂದಿಗೆ ಪ್ರಯಾಣಿಸಿಲ್ಲ ಮತ್ತು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ.
ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ವೆಸ್ಟ್ ಇಂಡೀಸ್ ಸರಣಿಯ ಟಿ 20 ಐ ತಂಡದಲ್ಲಿ ಕೆಎಲ್ ರಾಹುಲ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ಹೆಸರಿಸಿದೆ. ಕೆಎಲ್ ರಾಹುಲ್ ಅವರನ್ನು ಈ ಮೊದಲು ತಂಡದಲ್ಲಿ ಹೆಸರಿಸಲಾಗಿತ್ತು ಮತ್ತು ಟಿ20ಐ ಸರಣಿಯಲ್ಲಿ ಅವರ ಭಾಗವಹಿಸುವಿಕೆಯು ಫಿಟ್ನೆಸ್ಗೆ ಒಳಪಟ್ಟಿತ್ತು ಎಂದಿದೆ.
ಕಳೆದ ವಾರ ಬ್ಯಾಟರ್ಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿ ಪಡೆಯಲು ಸೂಚಿಸಿದೆ. ಸಂಜು ಸ್ಯಾಮ್ಸನ್ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದರು, ತಂಡವು 3-0 ಅಂತರದಿಂದ ಗೆದ್ದಿತು ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.




