ಉಡುಪಿ: ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಶೇ.40ರಷ್ಟು ಗುತ್ತಿಗೆ ಕಾಮಗಾರಿಯಲ್ಲಿ ಕಮೀಷನ್ ಗೆ ಒತ್ತಾಯಿಸುತ್ತಿದ್ದಾರೆ. ಶೇ.40ರಷ್ಟು ಕಮೀಷನ್ ಕೊಟ್ರೇ ಮಾತ್ರವೇ ಗುತ್ತಿಗೆ ಕಾಮಗಾರಿಯ ಹಣ ಬಿಡುಗಡೆ ಮಾಡೋದಾಗಿ ಗಂಭೀರ ಆರೋಪ ಮಾಡಿದ್ದಂತ ಸಂತೋಷ್ ಕೆ ಪಾಟೀಲ್ ಅವರು ಇದೀಗ ನಾಪತ್ತೆಯಾಗಿದ್ದರು. ಇದೀಗ ಅವರು ಉಡುಪಿಯ ಖಾಸಗೀ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
ಸಂತೋಷ್ ಕೆ ಪಾಟೀಲ್ ನಾಪತ್ತೆಗೂ ಮುನ್ನಾ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಾಪ್ ನಲ್ಲಿ ಡೆತ್ ನೋಟ್ ಕಳುಹಿಸಿತ್ತು, ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬುದಾಗಿ ತಿಳಿಸಿದ್ದಾರೆ. ಈ ಬಳಿಕ ನಾಪತ್ತೆಯಾಗಿರೋದಾಗಿ ತಿಳಿದು ಬಂದಿತ್ತು.
ಇನ್ನೂ ಸಂತೋಷ್ ನಾಪತ್ತೆಯಾಗಿರುವಂತ ವಿಚಾರ ತಿಳಿಯುತ್ತಿದ್ದಂತೇ, ಪೊಲೀಸರು ಅಲರ್ಟ್ ಆಗಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದರು. ಈ ಬೆನ್ನಲ್ಲೇ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು, ಉಡುಪಿಯ ಖಾಸಗಿ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರ ಮೃತದೇಹ ಖಾಸಗಿ ಹೋಟೆಲ್ ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.




