ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಸಂತೋಷ್ ಕೆ ಪಾಟೀಲ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯುತ್ತೀರಾ ಎನ್ನುವ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಅಂತ ಮುಂದೆ ಓದಿ..

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಈ ಪ್ರಕರಣದ ಕುರಿತಂತೆ ಪ್ರಾಥಮಿಕ ವರದಿ ಅನ್ವಯ ಕ್ರಮ ಕೈಗೊಳ್ಳುತ್ತೇವೆ. ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡೋದಿಲ್ಲ. ಅಲ್ಲದೇ ಈ ಸಂಬಂಧ ಸಚಿವ ಈಶ್ವರಪ್ಪ ಅವರಿಂದ ರಾಜೀನಾಮೆ ಕೂಡ ಪಡೆಯುವ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.

ಇನ್ನೂ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ವ್ಯವಸ್ಥಿತವಾಗಿ ಏನೆಲ್ಲಾ ತನಿಖೆಯಾಗಬೇಕು ಅದೆಲ್ಲಾ ಆಗಲಿದೆ. ಕಾನೂನು ರೀತಿ ಏನೇನು ಪರಿಶೀಲನೆ ಆಗಬೇಕೋ ಅದು ಆಗಲಿದೆ. ಸಚಿವ ಈಶ್ವರಪ್ಪ ಕಮೀಷನ್ ಆರೋಪ ಮಾಡಿದ ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಕಿದ್ದಾರೆ. ಈ ಎಲ್ಲಾ ಅಂಶಗಳು ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದರು.

About The Author