ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.57 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 1.57 ಲಕ್ಷ ಹೆಕ್ಟೇರ್‍ಗಳಷ್ಟು ಬಿತ್ತನೆಯಾಗಿದೆ. 1.1.2023 ರಿಂದ 2.8.2023 ರವರೆಗೆ 415 ಮಿ.ಮೀ. ವಾಡಿಕೆ ಮಳೆಗೆ 391 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 11,300 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಹಾಗೂ 35,807 ಮೆ.ಟನ್‍ಗಳಷ್ಟು ವಿವಿಧ ರಸಗೊಬ್ಬರಗಳನ್ನು ಪೂರೈಸಲಾಗಿದೆ ಎಂದು ಹೇಳಿದರು.
ಜನಪ್ರಿಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ತಾವು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಮುಖಾಂತರ ನಾಡಿನ ಜನತೆಗೆ ಕಳೆದ 3 ತಿಂಗಳಲ್ಲಿ ಸ್ಪಷ್ಟಪಡಿಸಿ ರಾಜ್ಯದ ಜನತೆಯ ಪ್ರೀತಿ ಗಳಿಸಿರುತ್ತಾರೆ. ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ವರ್ಗದ ಬಡ ಜನರಿಗೆ ಭದ್ರತೆಯನ್ನು ಒದಗಿಸಲು ಸರ್ಕಾರ ಸದಾ ಬದ್ಧವಾಗಿದೆ ಹಾಗೂ ಜನರ ನಿರೀಕ್ಷೆಯಂತೆ ನುಡಿದಂತೆ ನಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.
ದೇಶಕ್ಕೆ ಶಾಂತಿ ಹಾಗೂ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ಹಾಗೂ ರಾಷ್ಟ್ರೀಯ ಹೋರಾಟದಲ್ಲಿ ದುಡಿದ ಮತ್ತು ಮಡಿದ ಮಹಾನುಭಾವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳೋಣ. ಕರೆಗೆ ಓಗೊಟ್ಟು ಸಮಾರಂಭದಲ್ಲಿ ಭಾಗವಹಿಸಿರುವ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಗಣ್ಯ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಸಲಹೆ ಹಾಗೂ ಸಹಕಾರವನ್ನು ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.
Digvijay Singh: ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ:
Jagadish Shetter: ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ಶೆಟ್ಟರ್