political news :
ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ ಸ್ಯಾಂಟ್ರೋ ಪ್ರಕರಣವನ್ನ ಸಿಐಡಿಗೆ ಒಪ್ಪಿಸಿದೆ.
ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಇದೀಗ ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಸ್ಯಾಂಟ್ರೋ ರವಿ ಸಿಐಟಿ ಕಸ್ಟಡಿಯಲ್ಲಿ ಇದ್ದು, ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡದಿಂದ ವಿಚಾರಣೆ ನಡೆಯುತ್ತಿದೆ. ಇಂದು ಮತ್ತೆ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಈ ನಡುವೆ ಹೇಳಿಕೆ ದಾಖಲಿಸಲು ಸ್ಯಾಂಟ್ರೋ ಪತ್ನಿ ಸಿಐಡಿ ಕಚೇರಿಗೆ ಆಗಮಿಸುವ ಸಾಧ್ಯತೆ ಇದ್ದು, ಆಕೆಯ ಹೇಳಿಕೆ ಸೇರಿದಂತೆ ಸಿಐಡಿ ಅಧಿಕಾರಿಗಳು ಪ್ರತಿಯೊಂದು ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.