ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯೊಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.
ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಕ್ನಲ್ ನೀಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಟ್ ನ್ಯೂಸ್ ನೀಡಿದೆ.
ಈ ಕುರಿತಂತೆ ಕರ್ನಾಡಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ ೨೨-೦೩-೨೦೨೨ ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತರ ಸಿಎಲ್‌ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿ ವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯದಿ ಸೌಲಭ್ಯವನ್ನು ಪಡೆಯಲು ಅನರ್ಹರಾಗಿರುತ್ತಾರೆ.
ಈ ಹಿನ್ನಲೆಯಲ್ಲಿ ಪ್ರಸ್ತುತ ಇರುವ ಪರೀಕ್ಷಾ ಕೇಂದ್ರಗಳ ಜೊತೆಗೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸುವAತೆ ಸರ್ಕಾರಕ್ಕೆ ನೌಕರರ ಸಂಘವು ಮನವಿ ಮಾಡಿತ್ತು. ಈ ಮನವಿ ಪರಿಗಣಿಸಿರುವಂತೆ ಇ-ಆಡಳಿತ ಇಲಾಖೆಯು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚುವರಿಯಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ಅನುಮತಿ ನೀಡಿರೋದಾಗಿ ತಿಳಿಸಿದ್ದಾರೆ.