- Advertisement -
ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು.
ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್ ಸಿ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸತ್ಯ ಮೇವ ಜಯತೆ ಕಾರ್ಯಕ್ರಮ ನಡೆಯಲಿದ್ದು, ಸುಮಾರು ೧೨ ಎಕರೆ ಪ್ರದೇಶದಲ್ಲಿ ಸಮಾವೇಶಕ್ಕೆ ಭರದಿಂದ ಸಿದ್ಧತೆ ಸಾಗಿದೆ.
ಕಾರ್ಯಕ್ರಮದಲ್ಲಿ ೧ ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ.
‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’
- Advertisement -